ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ ಮೇ೨೫ ;- ರಾಜ್ಯಾದ್ಯಂತ ಕೊರೋನಾ ವೈರೆಸ್ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-೧೯ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಯಲ್ಲಿ  ಕರ್ತವ್ಯ ನಿರ್ವಹಿಸಲು ಸೆಪ್ಟೆಂಬರ್- ೨೦೨೧ರವರೆಗೆ ಅಥವಾ ಮುಂದಿನ ಆದೇಶದವರೆಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.


 ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಬಯೋಡೇಟಾ , ವಿದ್ಯಾರ್ಹತೆಗೆ ಸಂಬAಧಿಸಿದ ಮೂಲ ದಾಖಲೆ ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಮೇ.೨೯ ರ ಬೆಳಿಗ್ಗೆ ೧೧ ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ೫೦ ಹುದ್ದೆಗಳಿದ್ದು, ಮಾಸಿಕ ಗೌರವ ಧನ ೧೫.೦೦೦ ರೂ ನೀಡಲಾಗುತ್ತದೆ. ಸಿಬ್ಬಂದಿಗಳನ್ನು ಕೋವಿಡ್-೧೯ ನಿರ್ವಹಣೆಗೆ ಬಳಸಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯೋಮಿತಿ ೪೦ ವರ್ಷದೊಳಗಿರಬೇಕೆಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.


Post a Comment

Previous Post Next Post