ಕೊರೊನಾಗೆ ಹಾಸನ ಜಿಲ್ಲೆಯ ಹಿರಿಯ ಪತ್ರಕರ್ತ ಬಲಿ




ಚನ್ನರಾಯಪಟ್ಟಣ: ತಾಲ್ಲೂಕಿನ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಸ್ವಾಮಿಗೌಡ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಒಂದು ವಾರದ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಇಂದು ಅವರಿಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರು ಎಳೆದಿದ್ದಾರೆ.

  ತಾಲ್ಲೂಕು  ಉತ್ತಮ ಪತ್ರಕರ್ತರೊಬ್ಬರನ್ನು ಕಳೆದುಕೊಂಡಿದೆ.

 ಜನತೆ ಕೊರೊನಾ ವಿಚಾರವಾಗಿ ತಾತ್ಸಾರ ಮಾಡದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು ನಿಮ್ಮಗಳ ಜೀವದ ಜೊತೆಗೆ ನಿಮ್ಮ ಕುಟುಂಬವನ್ನು ಕಾಪಾಡಿಕೊಳ್ಳಿ.   
ಸಂತಾಪ: ಸ್ವಾಮಿಗೌಡ ಅವರ ನಿಧನಕ್ಕೆ ತಾಲ್ಲೂಕಿನ ಜನತೆ ಹಾಗೂ ಗೆಳೆಯರ ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Post a Comment

Previous Post Next Post