ಬೆಂಗಳೂರು ನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇಗೌಡ ನಿಧನ

ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇಗೌಡ ಅವರು ಕೊರೋನಾ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದರು. ಕೆಲವು ದಿನಗಳ ಹಿಂದೆ ಕರೊನಾ ಸೋಂಕಿಗೆ ಒಳಗಾಗಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆ ಒದಗಿಸಲಾಗಿದ್ದರೂ ಅವರು ಬದುಕುಳಿಯಲಿಲ್ಲ.
ಕನ್ನಡ ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ, ಗಾಯಕರಾಗಿ, ಕನ್ನಡ ಸಂಸ್ಕೃತಿ ಚಿಂತಕರಾಗಿ ನಿರಂತರ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಿದ್ದ ಅವರು ಕನ್ನಡಪರ ಹೋರಾಟಗಾರರಾಗಿಯೂ ತೊಡಗಿಸಿಕೊಂಡಿದ್ದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲದೆ, ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

Post a Comment

Previous Post Next Post