ನಿಡುವಾಳೆ ಗ್ರಾಮದಲ್ಲಿ ವ್ಯಾಕ್ಸಿನ್ ಗಾಗಿ ಜನರು ಮುಗಿಬಿದ್ದ ಜನ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ನಿಡುವಾಳೆ ಗ್ರಾಮದಲ್ಲಿ ವ್ಯಾಕ್ಸಿನ್ ಗಾಗಿ ಜನರು ಮುಗಿಬಿದ್ದಿದ್ದಾರೆ ಎಂದು ವರದಿಯಾಗಿದೆ.

50 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದರೂ ಆರೋಗ್ಯ ಕೇಂದ್ರಕ್ಕೆ 400ಕ್ಕೂ ಹೆಚ್ಚು ಜನ ಆಗಮಿಸಿದ್ದರು. ಲಸಿಕೆ ಸಿಗದಿರುವುದರಿಂದ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನೀವು ತಪ್ಪು ಮಾಹಿತಿ ನೀಡಿದ್ದರಿಂದ ನಾವೆಲ್ಲ ಬಂದಿದ್ದೇವೆ. ದಯವಿಟ್ಟು ಹಳ್ಳಿ ಜನರನ್ನು ಕಾಪಾಡಿ ಎಂದು ಜನರು ಅವಲತ್ತುಕೊಂಡಿದ್ದಾರೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಾತ್ರ 50 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Post a Comment

Previous Post Next Post