ಹಾಸನದಲ್ಲಿಂದು ಒಟ್ಟು 1581 ಮಂದಿಕೆ ಕೋವಿಡ್ ಸೋಂಕು ದೃಡವಾಗಿದ್ದು 9 ಮಂದಿ ಸಾವನ್ನಪ್ಪಿದ್ದಾರೆ.


ಹಾಸನ ಮೇ26 :- ಜಿಲ್ಲೆಯಲ್ಲಿಂದು ಹೊಸದಾಗಿ 1581 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 77790 ಏರಿಕೆಯಾಗಿದೆ. ಕಳೆದ ವರ್ಷವೂ ಸೇರಿದಂತೆ 2021 ಮಾರ್ಚ್ 26 ರಿಂದ ಇದುವರೆಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 48621 ಆಸ್ಪತ್ರೆಯಿಂದ ಇಂದು 1278 ಮಂದಿ ಬಿಡುಗಡೆ ಹೊಂದಿರುವವರು ಸೇರಿದಂತೆ ಒಟ್ಟು 63545 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 13293 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 163 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 9 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 952 ಕ್ಕೆ ಏರಿಕೆಯಾಗಿದೆ
.


Post a Comment

Previous Post Next Post