ಹಾಸನ ಮೇ.೧೦:- ಕೃಷಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ಮುಸುಕಿನ ಜೋಳ, ಹಿಂಗಾರಿ ಜೋಳ, ತೊಗರಿ, ಅಲಸಂದೆ, ಹೆಸರು ಮುಂತಾದ ಬೆಳೆಗಳ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿರುತ್ತದೆ.
ರಾಜ್ಯ ಸರ್ಕಾರವು ಕೋವಿಡ್ -೧೯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ ೧೦ ರಿಂದ ೨೪ರವರೆಗೆ ಲಾಕ್ ಡೌನ್ ಮಾಡಿರುವುದರಿಂದ ಹಾಸನ ತಾಲ್ಲೂಕಿನ ೫ ಹೋಬಳಿಗಳಲ್ಲಿ ರೈತ ಸಂಪರ್ಕ ಕೇಂದ್ರಗಳು ಬೆಳಗ್ಗೆ ೬ ರಿಂದ ೧೦ ಗಂಟೆಯವರೆಗೆ ತೆರೆದಿರುತ್ತವೆ ಹಾಗೂ ರೈತಬಾಂಧವರು ಸಹಾಯಧನದಲ್ಲಿ ಬಿತ್ತನೆ ಬೀಜ ಮತ್ತು ಇತರ ಕೃಷಿ ಪರಿಕರಗಳನ್ನು ನಿಗದಿತ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪಡೆಯಬಹುದಾಗಿರುತ್ತದೆ.
ಭೇಟಿ ನೀಡುವ ರೈತರು ತಪ್ಪದೆ ಕೋವಿಡ್ ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Tags
ಹಾಸನ
