ಹಾಸನ ಜೂ.೦೨:- ಹಿಮ್ಸ್ ಆಸ್ಪತ್ರೆಯ ವೈದ್ಯರ ವಸತಿ ನಿಲಯದಲ್ಲಿ ಪ್ರಾರಂಭಿಸಲಾಗಿರುವ ೧೫೦ ಹಾಸಿಗೆಗಳ ಸ್ಟೆಪ್ ಡೌನ್ ಎರಡನೇ ಹಂತದ ಆಸ್ಪತ್ರೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಚಾಲನೆ ನೀಡಿದ್ದಾರೆ.
ಇದೇ ವೇಳೆ ಯುನೈಟೆಡ್ ವೇ ಸಂಸ್ಥೆ ನೀಡಿದ ೧೦ ಲೀಟರ್ ಸಾಮರ್ಥ್ಯದ ೩೦ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಹಿಮ್ಸ್ ಗೆ ಹತ್ತಾಂತರ ಮಾಡಲಾಯಿತು.
೨.೫ ಕೋಟಿ ರೂಪಾಯಿ ವೆಚ್ಚದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸಾ ವ್ಯವಸ್ಥೆ ಹಾಗೂ ಮಕ್ಕಳಾ ಕೋವಿಡ್ ಚಿಕಿತ್ಸಾ ವ್ಯವಸ್ಥೆಗೆ ಪ್ರತ್ಯೇಕ ೩೦ ವೆಂಟಿಲೇಟರ್ ಸೌಲಭ್ಯಗಳನ್ನು ಯುನೈಟೆಡ್ ವೇ ಸಂಸ್ಥೆ ಮುಂದೆ ಬಂದಿರುವುದಾಗಿ ಸಚಿವರಾದ ಕೆ. ಗೋಪಾಲಯ್ಯ ಹಾಗೂ ಶಾಸಕರಾದ ಪ್ರೀತಮ್ ಜೆ ಗೌಡ ಅವರು ಹೇಳಿದರು.
ಶಾಸಕರಾದ ಕೆ. ಎಂ. ಶಿವಲಿಂಗೇಗೌಡ, ವಿಧಾನಪರಿಷತ್ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್ , ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Tags
ಹಾಸನ