ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಯಾರಾದರೂ ಕೊರೊನಾದಿಂದ ಸಾವನ್ನಪ್ಪಿದ್ದರೆ ಅಂಥವರ ಕುಟುಂಬಗಳಿಗೆ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಅಂಥ ಕುಟುಂಬಗಳ ಒಬ್ಬರಿಗೆ ಮಾತ್ರ ನೆರವು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ನಟ ಸಂಚಾರಿ ವಿಜಯ್ ವಿಧಿವಶರಾಗಿರುವುದಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬಕ್ಕೆ ದೇವರು ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದಿದ್ದಾರೆ. ಸಂಚರಿ ವಿಜಯ್ ಸಾವಿನ ಬಗ್ಗೆ ಈವರೆಗೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Tags
ರಾಜ್ಯ