ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 6 ತಿಂಗಳುಗಳಿಂದ ರೈತರು ನಡೆಸುತ್ತಿರುವ ಚಳುವಳಿಯ ಮುಂದುವರೆದ ಭಾಗವಾಗಿ ಇಂದು ದೇಶಾದ್ಯಂತ ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ಸಂಪೂರ್ಣ ಕ್ರಾಂತಿ ದಿನವನ್ನು ಆಚತಿಸಲು ಕರೆ ನೀಡಲಾಯಿತು..
ಇದರ ಭಾಗವಾಗಿ ಹಾಸನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಆರ್.ಸಿ.ರಸ್ತೆಯ ಶ್ರಮ ಕಛೇರಿ ಎದುರು ಪ್ರತಿಭಟನೆ ನಡೆಲಾಯಿತು.
1974 ರ ಜೂನ್ 5 ರಂದು ಜಯಪ್ರಕಾಶ್ ನಾರಾಯಣರವರು ಅಂದಿನ ಸರ್ವಾಧಿಕಾರಿ ಇಂದಿರಾಗಾಂಧಿ ವಿರುದ್ಧ ಸಂಪೂರ್ಣ ಕ್ರಾಂತಿಗೆ ಕರೆ ನೀಡಲಾಗಿತ್ತು. 2020 ಜುನ್ 5 ರಂದು ಸರ್ವಾಧಿಕಾರಿ ನರೇಂದ್ರ ಮೋದಿ ಸರ್ಕಾರ ಸಂಸತ್ತಿನಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಯಿತು. ಇವೆಲ್ಲವುಗಳ ಹಿನ್ನೆಲೆಯಲ್ಲಿ ಇಂದು ಸಂಪೂರ್ಣ ಕ್ರಾಂತಿ ದಿನವನ್ನು ನೆನಪು ಮಾಡುತ್ತ ಕೇಂದ್ರ ಸರ್ಕಾರ ಕೂಡಲೇ ಕೃಷಿ ಕಾಯ್ದೆಗಳು ಮತ್ತು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಬಾಬು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಎಚ್.ಆರ್. ನವೀನ್ ಕುಮಾರ್, ಕಾರ್ಯದರ್ಶಿ ವಸಂತ್ ಕುಮಾರ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಧರ್ಮೇಶ್, ಕಾರ್ಯದರ್ಶಿ ಅರವಿಂದ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಭಾಗವಹಿಸಿದ್ದರು.
Tags
ಹಾಸನ