ಒಂದೇ ಗ್ರಾಮದ 91 ಮಂದಿಗೆ ಕೊರೊನಾ ಪಾಸಿಟಿವ್

 ಹಾಸನ: ಒಂದೇ ಗ್ರಾಮದ 91 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ.

ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಲ್ಯ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದ್ದು, ಕಳೆದ ಒಂದೂವರೆ ತಿಂಗಳಲ್ಲಿ 91 ಪಾಸಿಟಿವ್ ಕೇಸ್ ಬಂದಿವೆ. ಹೀಗಾಗಿ ಅಧಿಕಾರಿಗಳು ಗ್ರಾಮವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ, ಸೀಲ್ ಡೌನ್ ಮಾಡಿದ್ದಾರೆ.



 

50 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಕೆಲವರು ಖಾಸಗೀ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಗ್ರಾಮಕ್ಕೆ ಯಾರೂ ಬರದಂತೆ ಹಾಗೂ ಗ್ರಾಮದಿಂದ ಯಾರೂ ಹೋರ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Post a Comment

Previous Post Next Post