ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ
ಕೆ.ಗೋಪಾಲಯ್ಯ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ ಹೆಚ್ಚುವರಿಯಾಗಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು ಇದಕ್ಕೆ ಮುಖ್ಯಮಂತ್ರಿಯವರು ಸ್ಪಂದಿಸುವ ನಿರೀಕ್ಷೆಯಿದ್ದು ,ನಾಳೆ ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಲಾಕ್ ಡೌನ್ ಮುಂದುವರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
Tags
ಹಾಸನ