ಹಾಸನ ಜೂ.೦೫:- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರು ಇಂದು ಕೋವಿಡ್ ೧೯ ನಿಯಂತ್ರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-೧೯ ತಪಾಸಣೆ ಸಂಖ್ಯೆ ಹೆಚ್ಚುತ್ತಿರುವುದು ಒಳ್ಳೆಯದು ಆದರೆ ಸಕ್ರಿಯ ಸೋಂಕಿತರ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.
ಎಲ್ಲಾ ಸೋಂಕಿತರನ್ನು ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಗಳಿಗೆ ಕರೆತರಬೇಕು ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಢ ವಿಧಿಸಿ ಸೋಂಕು ಹರಡುವುದನ್ನು ಕಡಿಮೆ ಮಾಡಿ ಎಂದು ನವೀನ್ ರಾಜ್ ಸಿಂಗ್ ತಿಳಿಸಿದರು.
ಇನ್ನೇನು ಅನ್‌ಲಾಕ್ ಪ್ರಕ್ರಿಯೆಗಳು ಪ್ರಾರಂಭವಾಗುವುದರೊಳಗೆ ಶೇಕಡಾ ಪಾಸಿಟೀವಿಟಿ ದರ ೫ಕ್ಕಿಂತ ಕಡಿಮೆಗೆ ಇಳಿಕೆಯಾಗಬೇಕು ಅದಕ್ಕೆ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಗ್ರಾಮಗಳಲ್ಲಿ ಎಲ್ಲ ಸೋಂಕಿತರನ್ನು ಗುರುತಿಸಿ ಸ್ಥಳಾಂತರಿಸಿ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲೆಯಲ್ಲಿ ಹಾಲಿ ಇರುವ ಕೋವಿಡ್ ೧೯ ಸ್ಥಿತಿಗತಿ, ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳು, ಆಮ್ಲಜನಕ ಪೂರೈಕೆ, ಔಷಧಿಗಳ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಅಂದರೆ ಪ್ರತಿದಿನ ಸರಾಸರಿ ೬೦೦೦ ರಿಂದ ೭೦೦೦ ತಪಾಸಣೆ ನಡೆಸುತ್ತಿರುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ ಶೇಕಡವಾರು ಪ್ರಮಾಣದಲ್ಲಿ ಕಡಿಮೆಯಾಗಿದೆ ಮುಂದಿನ ದಿನಗಳಲ್ಲಿ ಸಕ್ರಿಯ ಪ್ರಕರಣ ಕಡಿಮೆಯಾಗಲಿದೆ ಎಂದರು.
ನಗರಸಭಾ ಪ್ರದೇಶಗಳಲ್ಲಿ ಜನ ದಟ್ಟಣೆ ನಿಯಂತ್ರಿಸಲು ಮಾರುಕಟ್ಟೆಗಳನ್ನು ಹಲವು ಕಡೆಗಳಿಗೆ ವಹಿಸಲಾಗಿದೆ ವೈದ್ಯರು ಹಾಗೂ ಜಿಲ್ಲಾಡಳಿತದ ವಾರದಲ್ಲಿ ಎರಡು ಬಾರಿ ಪ್ರತಿ ಮನೆಯಲ್ಲಿ ತಪಾಸಣೆ ನಡೆಸುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಲಾಗುತ್ತಿದೆ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಆಸ್ಪತ್ರೆಗಳಲ್ಲಿ ವೈದ್ಯರ ಕಾರ್ಯಕ್ರಮ ಪರಿಣಾಮಕಾರಿಯಾಗಿ ನಡೆದಿದೆ ಸೋಂಕಿತರನ್ನು ಗುರುತಿಸಲು ಸಹಾಯಕವಾಗುತ್ತದೆ ಎಂದರು.
ಹಿಮ್ಸ್ ನಿರ್ದೇಶಕರಾದ ಡಾ ರವಿಕುಮಾರ್, ಜಿಲ್ಲಾ ಶಸ್ತçಚಿಕಿತ್ಸಕರಾದ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಮತ್ತಿತರ ಅಧಿಕಾರಿಗಳು ವೀಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.