ಹಾಸನ: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ರಸಗೊಬ್ಬರದ ಬೆಲೆ ಏರಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ದೋರಣೆ ಖಂಡಿಸಿ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ದೇವರಾಜೇಗೌಡ ನೇತೃತ್ವದಲ್ಲಿ ತಾಲೂಕಿನ ಕಟ್ಟಾಯ ಪೆಟ್ರೋಲ್ ಬಂಕ್ ಮುಂದೆ ಗ್ರಾಮಸ್ಥರು ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಲಾಯಿತು.
ಇದೆ ವೇಳೆ ಮಾತನಾಡಿದ ಅವರು, ಕೊರೋನಾ ಆವರಿಸಿ ಜನರು ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದರು. ಕೋವಿಡ್ ಮಹಾಮಾರಿಯಿಂದ ದೇಶದ ಜನರ ಬದುಕು ಆತಂತ್ರವಾಗಿದೆ. ಮೊದಲ ಸರ್ಕಾರಗಳು ಜನರ ಜೀವ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಆದರೆ ಬಿಜೆಪಿ ಸರ್ಕಾರ ಇಂಧನ, ರಸಗೊಬ್ಬರ, ಅಡುಗೆ ಅನಿಲಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾಮಾನ್ಯ ಜನರ ಬದುಕುಗಳ ಬಗ್ಗೆ ಮನಗಂಡು ಬೆಲೆ ಇಳಿಕೆ ಮಾಡಿ ಕೊವೀಡ್ ನಿಂದ ಜನರ ಪ್ರಾಣ ಉಳಿಸಿ ಅವರಿಗೆ ನೆರವಾಗುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಈಗ ಲೀಟರ್ ಪೆಟ್ರೋಲ್ ಗೆ ನೂರು ರೂಗಳಾಗಿದೆ. ಇದೆ ರೀತಿ ಮುಂದುವರೆದರೇ ಮುಂದಿನ ದಿನಗಳಲ್ಲಿ ಜನರು ಬಿಜೆಪಿ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಇಂತಹ ಸರಕಾರದ ವಿರುದ್ಧ ಧ್ವನಿ ಎತ್ತಿ ಬಡವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರಕೂಗಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ದೇವರಾಜೇಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಲ್ಲಿಗೆವಾಳ್ ದೇವಪ್ಪ, ಕಟ್ಟಾಯ ಗ್ರಾಮದ ಗಿರೀಶ್, ಲೋಹಿತ್, ಗೋಪಾಲ್, ಕಲ್ಲಳ್ಳಿ ಹರೀಶ್, ಗೊರೂರು ನಾಗರಾಜು, ಗೊಳ್ಳೇನಹಳ್ಳಿ ಸುನೀಲ್, ಹರೀಶ್, ನಾಗರಾಜು, ರಂಗೇಗೌಡ, ಪುಟ್ಟಸ್ವಾಮಿ, ಅಶೋಕ್ ನಾಯಕರಹಳ್ಳಿ, ಸ್ವಾಮೀಗೌಡ, ಜೆ.ಡಿ. ಜಯಂತಿ, ರವಿಕುಮಾರ್ ಇತರರು ಪಾಲ್ಗೊಂಡಿದ್ದರು.