ಹಾಸನ: ತೈಲ ಹಾಗೂ ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಲೇ ನಿಯಂತ್ರಿಸದಿದ್ದರೇ ಮುಂದಿನ ದಿವಸಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮೇಶ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಕಳೆದ ಎರಡು ತಿಂಗಳಿನಿAದ ಕೊರೋನಾ ಸೋಂಕು ತಡೆ ಗಟ್ಟುವುದಕ್ಕಾಗಿ ಲಾಕ್‌ಡೌನ್ ಘೋಷಿಸಿರುವುದರಿಂದ ಜನ ಸಾಮಾನ್ಯರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ವಿಧಿಸಿದ್ದರಿಂದ ದೇಶಾದ್ಯಂತ ಪೆಟ್ರೋಲ್ ಬೆಲೆ ಲೀಟರ್‌ಗೆ ೧೦೦ ರೂಪಾಯಿಗಿಂತಲೂ ಹೆಚ್ಚಾಗಿದೆ. ಜಗತ್ತಿನ ಯಾವ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಮೇಲೆ ಇಷ್ಟೊಂದು ತೆರಿಗೆ ವಿಧಿಸಿ ಪ್ರಜೆಗಳನ್ನು ಶೋಷಣೆ ಮಾಡುವ ಸರ್ಕಾರವಿರುವುದಿಲ್ಲ ಎಂದು ದೂರಿದರು. ಲಾಕ್‌ಡೌನ್‌ನಿಂದ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡು ಹಸಿವಿನಿಂದ ತತ್ತರಿಸಿದ್ದಾರೆ. ಇಂತಹ ಸಂದರ್ಭ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣವಾಗಿದೆ. ಅಡುಗೆ ಎಣ್ಣೆ ಲೀಟರ್‌ಗೆ ೨೦೦ ರೂ ದಾಟಿದರೆ, ಅಡುಗೆ ಸಿಲಿಂಡರ್ ಸಾವಿರ ರೂ ಸಮೀಪಿಸುತ್ತಿದೆ. ಆಹಾರ ಧಾನ್ಯಗಳು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದರು. ಇಂತಹ ಸಮಯದಲ್ಲಿ ಜನ ಸಾಮಾನ್ಯರ ನೆರವಿಗೆ ನಿಲ್ಲಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನಬಂದAತೆ ಜನರನ್ನು ಮತ್ತಷ್ಟು ಶೋಷಣೆ ಮಾಡುತ್ತಿವೆ. ಆದ್ದರಿಂದ ರಾಷ್ಟçಪತಿಗಳು ತಕ್ಷಣ ಮಧ್ಯ ಪ್ರವೇಶಿಸಿ ಅವೈಜ್ಞಾನಿಕ ತೆರಿಗೆಯನ್ನು ಕೈಬಿಡುವಂತೆ ಮತ್ತು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡಲು ಸೂಚಿಸುವಂತೆ ಮನವಿ ಮಾಡುತ್ತೇವೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜನ ವಿರೋಧಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜಯ ಕರ್ನಾಟಕ ಸಂಘಟನೆಯಿAದ ಜಿಲ್ಲೆಯಾದ್ಯಂತ ಉಗ್ರವಾದ ಪ್ರತಿಭಟನೆ ಹಮ್ಮಿ ಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಉಮೇಶ್, ಗೌರವಾಧ್ಯಕ್ಷ ಕೆ.ಆರ್. ರಘು, ಶ್ರೇಯಸ್, ನಗರಾಧ್ಯಕ್ಷ ಬಾಬು, ಲೋಹಿತ್, ಮೋಹನ್ ಇತರರು ಪಾಲ್ಗೊಂಡಿದ್ರು.