ಹಾಸನ ಜೂ೦೮ :-ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆ ಕಾರ್ಯ ಇನ್ನಷ್ಟು ಪರಿಣಾಮಾಕಾರಿಯಾಗಿಸಲು ಜಿಲ್ಲೆಯಲ್ಲಿ ರ‍್ಯಾಟ್ ಹಾಗೂ ರ‍್ಯಾಪಿಡ್ ಟೆಸ್ಟ್ಗಳನ್ನು ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಎಲ್ಲಾ ತಾಲ್ಲೂಕು ತಹಶೀಲ್ದಾರ್‌ಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಪ್ರತಿ ತಾಲ್ಲೂಕುಗಳಲ್ಲಿ ಎರಡನೇ ಹಂತದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಾಳೆಯಿಂದ ಪ್ರಾರಂಬಿಸಬೇಕು ಕೋವಿಡ್ ತಪಾಸಣೆ ಅಧಿಕವಾಗಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಪತ್ತೆಯಾಗುವ ಸೋಂಕಿತರೆಲ್ಲರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ಕರೆತಂದು ಸೂಕ್ತ ಚಿಕಿತ್ಸೆ ನೀಡಿ ಜೊತೆಗೆ ಪರಿಹಾರ ಪೋರ್ಟ್ಲ್‌ನಲ್ಲಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಲ್ಲಾ ಕೋವಿಡ್ ಕೇಂದ್ರಗಳಲ್ಲಿ ವೈದ್ಯರೆ ಕಡ್ಡಾಯವಾಗಿ ಸೋಂಕಿತರ ತಪಾಸಣೆ ನಡೆಸಿ ಆತ್ಮ ವಿಶ್ವಾಸ ತುಂಬಬೇಕು ವೈದ್ಯರ ಕೊರತೆ ಇದ್ದರೆ ಸ್ಥಳೀಯವಾಗಿ ಕ್ಲಿನಿಕ್ ನಡೆಸುತ್ತಿರುವ ಎಂ.ಬಿ.ಬಿ.ಎಸ್ ವೈದ್ಯರನ್ನು ನೇಮಿಸಿಕೊಂಡು ಚಿಕಿತ್ಸೆ ನೀಡಬೇಕು ಆಶಾ ಕಾರ್ಯಕರ್ತೆಯರು ವಾರದಲ್ಲಿ ಎರಡು ದಿನ ಸೋಂಕಿತರ ಮನೆ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಸಲಹೆ ಸೂಚನೆ ನೀಡುವಂತೆ ಸೂಚಿಸಿ ಎಂದರು.
ಸೋಂಕಿತರ ಪ್ರಾಥಮಿಕ ಸಂಪರ್ಕಿತರ ಗುರುತಿಸುವಿಕೆ ಕಾರ್ಯ ಚುರುಕುಗೊಳಿಸಿ, ೪೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಆದಷ್ಟು ಬೇಗ ಲಸಿಕೆ ನಿಡುವಂತೆ ಸೂಚನೆ ನೀಡಿದರು.
ಹೋಮ್ ಐಸೊಲೇಶನ್ ಹಾಗೂ ಹೋಮ್ ಕ್ವಾರಂಟೈನ್‌ನಲ್ಲಿರುವವರಿಗೆ ಸೀಲ್ ಹಾಕುವಂತೆ ಸೂಚಿಸಿದರಲ್ಲದೆ, ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗವಂತೆ ಹೆಚ್ಚಿನ ನಿಗಾವಹಿಸಿ, ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಮಾತ್ರೆಗಳು ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಅವರು ಮಾತನಾಡಿ ಶುಕ್ರವಾರದಂದು ಮುಖ್ಯ ಮಂತ್ರಿಯವರು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಸಂಚಾರ ನಿಯಂತ್ರಣದ ಉದ್ದೆಶದಿಂದ ಎಲ್ಲಾ ಅಂಗಡಿಗಳು ೯ ಗಂಟೆಗೆ ಮುಚ್ಚಿಸಿ ಅನವಶ್ಯಕವಾಗಿ ಸಾರ್ವಜನಿಕರು ಒಡಾಡದಂತೆ ಎಚ್ಚರವಹಿಸಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ತಪಾಸಣೆಗೆ ಹೆಚ್ಚಿನ ರ‍್ಯಾಟ್‌ಕಿಟ್ ಗಳನ್ನು ಪೂರೈಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್, ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಆರ್.ಸಿ.ಎಚ್.ಅಧಿಕಾರಿ ಡಾ|| ಕಾಂತರಾಜ್ ಹಾಗೂ ಎಲ್ಲಾ ತಾಲ್ಲೂಕು ತಹಶೀಲ್ದಾರ್‌ಗಳು ಮತ್ತಿತರರು ಹಾಜರಿದ್ದರು.