ಹಾಸನ ಜೂ೨೮:- ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜುಲೈ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿದ್ದು ಮಕ್ಕಳು ಧೈರ್ಯದಿಂದ ಯಾವುದೇ ಒತ್ತಡ ಮತ್ತು ತೊಂದರೆ ಇಲ್ಲದಂತೆ ಪರೀಕ್ಷೆ ಬರೆಯಲು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಬಂಧ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಸಚಿವರು ಪರೀಕ್ಷೆಯನ್ನು ಅತ್ಯಂತ ಸರಳ ರೀತಿಯಲ್ಲಿ ಎರಡು ದಿನ ನಡೆಸಲಾಗುತ್ತಿದೆ ಪರೀಕ್ಷೆಯ ಆತಂಕ ನಿವಾರಿಸಲು ಹಬ್ಬದ ವಾತಾವರಣ ಸೃಷ್ಟಿಸಿ ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದರು.
ಕೆಮ್ಮು ನೆಗಡಿ ಜ್ವರ ಸೇರಿದಂತೆ ರೋಗ ಲಕ್ಷಣಗಳಿರುವ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಹಾಗೂ ಕೋವಿಡ್ ಪಾಸಿಟಿವ್ ಇರುವ ಮಕ್ಕಳಿಗೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ ಎಂದರು.
ಎರಡು ದಿನವೂ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭಕ್ಕೂ ಮುಂಚೆ ಹಾಗೂ ನಂತರ ಕೊಠಡಿಗಳಿಗೆ ಸ್ಯಾನಿಟೈಸರ್ ಮಾಡಿಸಿ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿ ೧೪೪ ಸೆಕ್ಷನ್ ಜಾರಿಗೊಳಿಸಿ, ಪರೀಕ್ಷಾ ಕೇಂದ್ರದ ಪರೀಕ್ಷೆ ಕಾರ್ಯದಲ್ಲಿ ತೊಡಗುವ ಎಲ್ಲಾ ಶಿಕ್ಷಕರು ಸಿಬ್ಬಂದಿಗಳು ಕೋವಿಡ್ ಲಸಿಕೆ ಹಾಕಿಸಿಕೊಂಡಿರಬೇಕು.
ಸುತ್ತಲಿರುವ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್‌ಗಳನ್ನು ತೆರೆದಂತೆ ಆದೇಶಿಸಿ ಎಂದು ಸಚಿವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪೋಷಕರು ಹಾಗೂ ಮಕ್ಕಳ ದಟ್ಟಣೆಯಾಗದಂತೆ ಕ್ರಮವಹಿಸಿ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸುವಂತೆ ಸಚಿವರು ಸೂಚಿಸಿದರು.
ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗಬಾರದು ಆರೋಗ್ಯ ಸಮಸ್ಯೆಯಿಂದ ಜುಲೈ ಮಾಹೆಯಲ್ಲಿ ನಡೆಯುವ ದಿನಾಂಕದAದು ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ನಡೆಸುವ ಪರೀಕ್ಷೆಯನ್ನು ಬರೆಯಬಹುದಾಗಿದೆ ಎಂದರು.
ಒAದು ಡೆಸ್ಕ್ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ ೧೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿದೆ, ರಾಜ್ಯದಲ್ಲಿ ೪೮೮೪ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು ೭೩,೦೬೬ ಕೊಠಡಿ ಬಳಸಿಕೊಳ್ಳಲಾಗುತ್ತಿದೆ ೮.೭೬.೭೯೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಲು ಸ್ಕೌಟ್ಸ್ ಮತ್ತು ಗೈಡ್ಸ್, ಎನ್ .ಸಿ. ಸಿ ಅಭ್ಯರ್ಥಿಗಳನ್ನು ಬಳಸಿಕೊಳ್ಳಬಹುದಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕಾö್ಯನರ್, ಪಲ್ಸ್ ಆಕ್ಸಿಮೀಟರ್ ಇರುವಂತೆ ನೋಡಿಕೊಳ್ಳಿ ಪರಿಕ್ಷೆ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಂಡು ಪರಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ವಿದ್ಯಾರ್ಥಿಗೆ ವಾಸಸ್ಥಳದಿಂದ ಹತ್ತಿರವಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ವಿಡಿಯೋ ಸಂವಾದದ ನಂತರ ಮಾತನಾಡಿ ಪರಿಕ್ಷಾ ಕೊಠಡಿಗಳು ಸುವ್ಯವಸ್ಥೆಯಾಗಿದೆಯೇ ಎಂದು ಪರಿಶೀಲಿಸಿ ಹಾಗೂ ಎಲ್ಲಾ ಪರಿಕ್ಷಾ ಕೇಂದ್ರಗಳಿಗೂ ಸ್ಯಾನಿಟೈಸರ್ ಮಾಡಸಬೇಕು ಜೊತೆಗೆ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂಧಿಗಳು ಕೋವಿಡ್-೧೯ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾತಿಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಅಪರ ಪೊಲೀಸ್ ವರಿಷ್ಠಧಿಕಾರಿಗಳಾದ ಶ್ರೀನಿವಾಸ್‌ಗೌಡ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪ್ರಕಾಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.