ಹಾಸನ: ಆರ್‌ಟಿಪಿಸಿಆರ್ ತಪಾಸಣೆ ಹೆಚ್ಚಿಸಿ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಕಡ್ಡಾಯವಾಗಿ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದ ಆಯ್ದ ಜಿಲ್ಲಾಧಿಕಾರಿಗಳೊಂದಿಗೆ ಕೊವೀಡ್ 19 ಕುರಿತು ಜೂನ್ 8 ರಂದು ಸಂಜೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಪಾಸಿಟಿವಿಟಿ ಅಧಿಕವಿರುವ ಕಡೆಗಳಲ್ಲಿ ಹೆಚ್ಚಿನ ನಿಗಾವಹಿಸಿ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮವಹಿಸಿ ಮುಂದಿನ ಒಂದು ವಾರದೊಳಗೆ ಕೋವಿಡ್ ಕಡಿಮೆ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಹೊಮ್ ಐಸೋಲೇಷನ್‌ನಲ್ಲಿರುವ ಸೊಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಹೆಚ್ಚಿನ ಮಟ್ಟದಲ್ಲಿ ಸ್ಥಳಾಂತರ ಮಾಡುವಂತೆ ಸೂಚಿಸಿದ ಅವರು, ಅರಕಲಗೂಡು ಹಾಗೂ ಹೊಳೆನರಸೀಪುರ ತಾಲೂಕುಗಳಲ್ಲಿ ಪಾಸಿಟಿವಿಟಿ ಹೆಚ್ಚಿದ್ದು ಕಠಿಣ ನಿಯಮಗಳನ್ನು ಜಾರಿಗೊಳಿಸಿ ನಿಯಂತ್ರಣಕ್ಕೆ ತನ್ನಿ ಎಂದರು.
ಅಭಿವೃದ್ಧಿ ಆಯುಕ್ತರಾದ ವಂದಿತ ಶರ್ಮಾ ಮಾತನಾಡಿ, ಲಾಕ್‌ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಮುನ್ನ ಕೋವಿಡ್ ಸೋಂಕು ಸಂಪೂರ್ಣ ಕಡಿಮೆಗೊಳಿಸಲು ಹೆಚ್ಚಿನ ಕ್ರಮವಹಿಸಬೇಕು, ಹಿಮ್ಸ್ ಲ್ಯಾಬ್‌ನಲ್ಲಿ ಕೋವಿಡ್ ವರದಿ ತಡವಾಗಿ ನೀಡುತ್ತಿದ್ದು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ 24 ಗಂಟೆಯಲ್ಲಿ ವರದಿ ನೀಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಕಳೆದು 3 ದಿನಗಳಿಂದ ಆರ್‌ಟಿಪಿಸಿಆರ್ ಟೆಸ್ಟ್ ಕಡಿಮೆ ಆಗಿದ್ದು ಪರೀಕ್ಷೆಗಳನ್ನು ಹೆಚ್ಚಿಸಲು ಸೂಕ್ತ ಕ್ರಮ ವಹಿಸಲಾಗುವುದು, ಈಗಾಗಲೇ ಮೊದಲನೇ ಹಂತದ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮುಕ್ತಾಯವಾಗಿದ್ದು ಎರಡನೇ ಹಂತವನ್ನು ಪ್ರಾರಂಭಿಸಲಾಗಿದೆ. ರೋಗ ಲಕ್ಷಣಗಳು ಕಂಡುಬAದಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಎಲ್ಲಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಆರೋಗ್ಯಧಿಕಾರಿಗಳಿಗೆ ಪ್ರತಿದಿನ 7,500 ಆರ್‌ಟಿಪಿಸಿಆರ್ ಹಾಗೂ ರ‍್ಯಾಟ್ ಪರೀಕ್ಷೆ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ 24 ಕೋವಿಡ್ ಕೇರ್ ಕೇಂದ್ರಗಳು ಚಾಲ್ತಿಯಲ್ಲಿದ್ದು 3,200 ಕ್ಕೂ ಹೆಚ್ಚು ಮಂದಿ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಹಾಗೂ ಮತ್ತಿತರರು ಹಾಜರಿದ್ದರು.