ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶ

 ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದಲಿಂಗಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಸಿದ್ಧಲಿಂಗಯ್ಯನವರು ಮಾಗಡಿ ತಾಲೂಕಿನ ಮಂಚನಬೆಲೆ’ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಇಂದು ಸಂಜೆ 4.45ಕ್ಕೆ ಸಿದ್ದಲಿಂಗಯ್ಯ ನಿಧನರಾಗಿದ್ದು, ಇವತ್ತೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.

Post a Comment

Previous Post Next Post