ಜಿಲೆಟಿನ್ ಸ್ಫೋಟ ಪ್ರಕರಣ- ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡಿದ ಸಚಿವ ಗೋಪಾಲಯ್ಯ

 ಹಾಸನ: ಜಿಲೆಟಿನ್ ರೀತಿಯ ವಸ್ತು ಸಿಡಿದು ಮೃತಪಟ್ಟ ಮೂವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಪರಿಹಾರದ ಚೆಕ್ ವಿತರಿಸಿದರು.

ನಂತರ ಮಾತನಾಡಿದ ಅವರು, ಮೃತರ ಕುಟುಂಬದ ನಿರ್ವಹಣೆಗಾಗಿ 5 ಲಕ್ಷ ರೂ.ಗಳ ಚಕ್‍ನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವಿತರಿಸಲಾಗಿದೆ. ಇನ್ನೂ 7.5 ಲಕ್ಷ ರೂ.ಗಳನ್ನು ಗಣಿ ಮಾಲೀಕರಿಂದ ನೀಡಲಾಗುತ್ತದೆ ಎಂದು ತಿಳಿದಿದರು. ಈ ವೇಳೆ ಶಾಸಕ ಬಾಲಕೃಷ್ಣ, ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜ್, ಸಿಇಒ ಪರಮೇಶ್, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಉಪಸ್ಥಿತರಿದ್ದರು.

Post a Comment

Previous Post Next Post