ಸರಳವಾಗಿ ಆಚರಿಸಿದ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ

ಹಾಸನ: ನಗರದ ಎಂ.ಜಿ. ರಸ್ತೆ ಬಳಿ ಇರುವ ಶ್ರೀಆದಿಚುಂಚನಗಿರಿ ಶಾಖಾ ಮಠದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.


     ಕೊರೋನಾ ಹಿನ್ನಲೆಯಲ್ಲಿ ನಾಡಪ್ರಭು ಕೆಂಪೇಗೌಡರ ದಿನಾಚರಣೆಯನ್ನು ಸಂಭ್ರಮವಾಗಿ ಆಚರಿಸದೇ ಕೇವಲ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಇದೆ ವೇಳೆ ಮಾತನಾಡಿ ಪುಣ್ಯ ಪುರುಷನ ಜಯಂತಿ ಆಚರಿಸುವುದು ಪ್ರತಿಯೊಬ್ಬನ ಕರ್ತವ್ಯವಾಗಿದೆ. ಜಾತಿ ಮತ್ತು ವರ್ಗ ನೋಡದೇ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಲ್ಲಿ ಕೆರೆ ಕಟ್ಟೆ ನಿರ್ಮಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಕೇವಲ ಬೆಂಗಳೂರಿಗೆ ಮಾತ್ರವಲ್ಲ ಹೊರ ರಾಜ್ಯದಲ್ಲೂ ಅವರ ಸಾಧನೆ ಜೀವಂತವಾಗಿದೆ ಎಂದರು. ಕೆಂಪೇಗೌಡರ ತತ್ವ ಸಿದ್ಧಾಂತವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜ ನಿರ್ಮಿಸೋಣ ಎಂದು ಇದೆ ವೇಳೆ ನೆನಪಿಸಿಕೊಳ್ಳಲಾಯಿತು.

      ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶರಾದ ಶ್ರೀ ಶಂಭುನಾಥ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ, ರಾಜ್ಯ ಒಕ್ಕಲಿಗರ ಸೇನೆಯ ರಾಜ್ಯಾಧ್ಯಕ್ಷ ರಾಕೇಶ್ ಗೌಡ ಇತರರು ಉಪಸ್ಥಿತರಿದ್ದರು


Post a Comment

Previous Post Next Post