ಹಾಸನ : ಸ್ಯಾಂಡಲ್‍ವುಡ್ ಉದಯೋನ್ಮುಖ ನಟ ಸಂಚಾರಿ ವಿಜಯ್ ನಿಧನಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಸಂತಾಪ ಸೂಚಿಸಿದ್ದಾರೆ.
ಸಂಚಾರಿ ವಿಜಯ್ ಅವರು ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರು, ನಾವಿಬ್ಬರೂ ಒಟ್ಟಿಗೆ ಬ್ಯಾಡ್ಮಿಂಟನ್ ಆಡ್ತಾ ಇದ್ವಿ ವಿಜಯ್ ಅವರೊಂದಿಗೆ ಸಾಕಷ್ಟು ಸಮಯ ಕಳೆದಿದ್ದೇನೆ. ನಾನು ರಾಷ್ಟ್ರ ಪ್ರಶಸ್ತಿ ತೆಗೆದುಕೊಂಡಿದ್ದೇನೆ ಅನ್ನೋ ಒಂದು ಸಣ್ಣ ಅಹಂ ಕೂಡ ವಿಜಯ್ ಅವರಿಗೆ ಇರಲಿಲ್ಲ. ಅವರಿಗೆ ಸಮಾಜದ ಬಗ್ಗೆ ಒಂದು ವಿಶೇಷ ಕಾಳಜಿ ಇತ್ತು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದರು ಎಂದಿದ್ದಾರೆ.
ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ವಿಜಯ್ ಇಂದು ನಮ್ಮೊಂದಿಗಿಲ್ಲ ಎನ್ನುವುದನ್ನು ಊಹಿಸಲೂ ಕಷ್ಟ ಆಗ್ತಾ ಇದೆ. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡ ದುಃಖ ಇಂದು ನನ್ನನ್ನಾವರಿಸಿದೆ ಎಂದು ಪ್ರಜ್ವಲ್ ಬೇಸರ ವ್ಯಕ್ತಪಡಿಸಿದ್ದಾರೆ.