ಹಾಸನ ಜೂನ್ ೧೦:- ಜಿಲ್ಲಾಧಿಕಾರಿ ಕಛೇರಿ ಆವಣದಲ್ಲಿ ಕೊರೋನಾ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನೆರವಾಗಲೆಂದು ಜಿಲ್ಲಾ ಪಂಚಾಯತ್ ಕೆಡಿಪಿ ಮಾಜಿ ಸದಸ್ಯ ದೇವರಾಜೇಗೌಡ ರವರು ಆಯೋಜಿಸಿದ್ದ ಉಚಿತ ಅಂಬುಲೆನ್ಸ್ ಸೇವೆಗೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯರವರು ಹಸಿರು ನಿಶಾನೆ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಸತೀಶ್, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜು ಇತರರು ಉಪಸ್ಥಿತರಿದ್ದರು.
Tags
ಹಾಸನ