ಹಾಸನ ಜೂ.೨೮:- ಯುವಜನರು ಮಾದಕ ವಸ್ತಗಳನ್ನು ತ್ಯಜಿಸುವುದರಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಬಿ.ಪರಮೇಶ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಆವರಣದಲ್ಲಿಂದು ಜೂನ್ ೨೬ ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ನಿಯೋಜಿಸಿದ್ದ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮಾದಕ ಔಷಧಗಳ ಬಗ್ಗೆ ಸತ್ಯಾಂಶ ತಿಳಿಸಿ ಮತ್ತು ಜೀವ ಉಳಿಸಿ ಎಂಬ ಘೋಷ ವಾಕ್ಯದೊಂದಿಗೆ ಯುವಜರಲ್ಲಿ ಅರಿವನ್ನು ಮೂಡಿಸಲು ಹಾಗೂ ಅದರಿಂದ ದೂರ ಉಳಿಯುವಂತೆ ಮಾಡುವುದೇ ಈ ದಿನಾಚರಣೆಯ ಉದ್ದೇಶವಾಗಿದೆ ಎಂದರು.
ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಸತೀಶ್, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ|| ವೇಣುಗೋಪಾಲ್, ಮನೋರೋಗ ತಜ್ಞರಾದ ಡಾ|| ಸಂತೋಷ್ ಹಾಗೂ ತಾಲ್ಲೂಕು ಆರೋಗ್ಯಧಿಕಾರಿಗಳು, ಆರೋಗ್ಯ ಅಧಿಕಾರಿಗಳು, ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಪಾಲೋಂಡಿದ್ದರು