ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಕ್ಸಿಜನ್ ಕಾನ್ಸಟ್ರೇಟರ್ ಕೊಡುಗೆ

ಹಾಸನ ಜೂ.೦೨:-ಕೋವಿಡ್-೧೯ ಹಿನ್ನಲೆಯಲ್ಲಿ ಸಾರ್ವಜನಿಕ ಸೇವೆಗೆ ಬಳಸಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಆಕ್ಸಿಜನ್ ಕಾನ್ಸಟ್ರೇಟರ್‌ಗಳನ್ನು  ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಮಾತನಾಡಿ ನಗರದ  ಮಂಜುನಾಥೇಶ್ವರ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವನ್ನಾಗಿ ಪರಿವರ್ತನೆ ಮಾಡಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಲ್ಲಿಯವರೆಗೆ ೩೫ ಆಕ್ಸಿಜನ್ ಕಾನ್ಸಟ್ರೇಟರ್ ನೀಡಿಲಾಗಿದೆ ಅಷ್ಟೇ ಅಲ್ಲದೆ ಎಲ್ಲಾ ಜನರಿಗೆ ಆಹಾರ, ಶಿಕ್ಷಣ ನೀಡಿ ಸಹಾಯದ ಮೂಲಕ ಅನೇಕ ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ  ಧರ್ಮಾಧಿಕಾರಿಗಳಾದ ಡಾ|| ವಿರೇಂದ್ರ ಹೆಗಡೆ ಅವರಿಗೆ  ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಮಂಜುನಾಥ್ ಮಾತನಾಡಿ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ಉಜಿರೆ, ಧಾರವಾಡ ಮತ್ತು ಮೈಸೂರಿನಲ್ಲಿ ಸಂಸ್ಥೆಯ ವತಿಯಿಂದ  ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಹಾಗೂ ೩೦೦ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ೧೦ ಸಾವಿರ ಮಂದಿ ಇದರ ಪ್ರಯೋಜನಾ ಪಡೆದುಕೊಂಡಿದ್ದಾರೆ ಜೊತೆಗೆ ಆಹಾರ ಕಿಟ್‌ಗಳನ್ನು ನೀಡಿದ್ದು. ಜನರ ಅನೇಕ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಬಿ.ಎ ಪರಮೇಶ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ರೇವತಿ ಸುಧಾಕರ್ ಹಾಗೂ ಮತ್ತಿತರ ಅಧಿಕಾರಿಗಳು ಪಾಲ್ಗೋಂಡಿದ್ದರು.


Post a Comment

Previous Post Next Post