ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದೆಮಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ (Scheme for formalisation of Micro food
processing enterprise : PMFME) ಅನ್ನು ಹೊಸದಾಗಿ ಪ್ರಾರಂಬಿಸಿರುತ್ತದೆ. ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮಹತ್ತರ ಪಾತ್ರ ನಿರ್ವಹಿಸಬೇಕಾಗಿರುವ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ನೀಡಲಾಗುವುದಿಲ್ಲ. ಆದರೆ ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಪಲಾನುಭವಿಯನ್ನು ಆಧರಿಸಿ ಬ್ಯಾಂಕ್ನಿಂದ ಸಾಲ ಮಂಜೂರಾತಿ ಆದ ನಂತರ ಬ್ಯಾಂಕ್ನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ ರೂ.20000.00 ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುವುದು. ಈ ಪೈಕಿ 50% ಮೊತ್ತವನ್ನು ಬ್ಯಾಂಕಿನಿAದ ಸಾಲ ಮಂಜೂರಾದ ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿಎಸ್ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಪಡೆದ ನಂತರ ಎಫ್.ಎಸ್.ಎಸ್.ಎ.ಐ ವತಿಯಿಂದ ಪ್ರಮಾಣಿತ ಅನುಸರಣೆಯನ್ನು ಪಡೆದ ನಂತರ ನೀಡಲಾಗುವುದು.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಅರ್ಹತೆ
2 ಆಹಾರ ಸಂಸ್ಕರಣ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷಗಳ ಅನುಭವವಿರಬೇಕು.
3 ಆಹಾರ ಸಂಸ್ಕರಣ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ದಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುವುದು.
ದಿನಾಂಕ 12.06.2021 ರೊಳಗೆ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಹಾಸನ ಕಛೇರಿಗೆ ಸಲ್ಲಿಸುವುದು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.