ಬೇಲೂರು: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಗಿ ಜ್ವರ ಜಾಗೃತಿ ಸಭೆ ನಡೆಸಲಾಯಿತು.
ತಹಸೀಲ್ದಾರ್ ಮೋಹನಕುಮಾರ್ ಅಧಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಡೆಂಗಿಜ್ವರ ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದ್ದು ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲಿನ ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ ಎಂದು ರೋಗ ಲಕ್ಷಣ ಕುರಿತು ಮಾಹಿತಿ ಒದಗಿಸಿದ ಅವರು, ಬೇಲೂರು ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂಗಿ ಹರಡದಂತೆ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ತಿಳಿಸಿದರು.
![]() |
| ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಗಿ ಜ್ವರ ಮುಂಜಾಗೃತಾ ಕ್ರಮ ಕುರಿತು ಮಾಸಾಚರಣೆ |
ಆರೋಗ್ಯಾಧಿಕಾರಿ ಕೃಷ್ಣಪ್ಪ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ, ಸೊಳ್ಳೆಗಳು ಹಾಗೂ ಲಾರ್ವ ಎಲ್ಲಿ ಇರುತ್ತದೆ, ಕೆರೆ ಕಟ್ಟೆಗಳ ಬಳಿ ಹೇಗೆ ವಾಸಿಸುತ್ತವೆ ಎಂಬ ಬಗ್ಗೆ ತಿಳಿಸಿದರಲ್ಲದೆ ಜ್ವರದ ಲಕ್ಷಣವಾದ ತೀವ್ರ ಜ್ವರ, ವಿಪರೀತ ತಲೆ ನೋವು, ಕಣ್ಣುಗಳ ಹಿಂಭಾಗ ಮಾಂಸಖAಡಗಳ ಮತ್ತು ಕೀಲುಗಳ ವಿಪರೀತ ನೋವು ಕಾಣಿಸಿಕೊಳ್ಳುವುದಾಗಿದೆ. ಇಂತಹ ಲಕ್ಷಣ ಕಂಡುಬAದ ತಕ್ಷಣ ಆಶಾ ಕಾರ್ಯಕರ್ತೆಯರು ಅಥವಾ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು. ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಇಒ ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಸುಜಯ್, ಆರೋಗ್ಯ ಇಲಾಖೆ ಸಿಬ್ಬಂದಿ ಇತರರು ಇದ್ದರು.
![]() |
| Advertisement |
![]() |
| Advertisement |


