ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ (Heavy Rain) ಆತಂಕ ಸೃಷ್ಟಿಸುತ್ತಿದ್ದು, ಕೆಲವೆಡೆ ಅನಾಹುತಕ್ಕೂ ಕಾರಣವಾಗಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ (Death) ದಾರುಣ ಘಟನೆ ನಡೆದಿದೆ. ದನಗಳಿಗೆ ಮೇವು ಹಾಕಲೆಂದು ಕೊಟ್ಟಿಗೆ ಒಳಗೆ ಹೋಗಿದ್ದ ಬಸವೇಗೌಡ (65ವರ್ಷ) ಸಾವಿಗೀಡಾಗಿದ್ದು, ಒಂದು ಹಸು (Cow) ಕೂಡಾ ಮಣ್ಣಿನಡಿ ಸಿಲುಕಿ ಕೊನೆಯುಸಿರೆಳೆದಿದೆ.


ಕಳೆದ ಕೆಲ ದಿನಗಳಿಂದ ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಟ್ಟಿಗೆಯ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದ್ದು, ಬಸವೇಗೌಡ ಅವರ ಜತೆಗೆ ಕೊಟ್ಟಿಗೆಯೊಳಕ್ಕೆ ತೆರಳಿದ್ದ ಮೊಮ್ಮಗ ರಮೇಶ್ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದಾರೆ.

Post a Comment

Previous Post Next Post