ಅರಕಲಗೂಡು :- ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು
ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ತಾಲೂಕು ಬಿಜೆಪಿ ಯುವ ಮೋರ್ಚಾವತಿಯಿಂದ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಮೂಲಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಲ್ಲಿಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಂ ಆರ್ ರಂಗಸ್ವಾಮಿ, ಯುವ ಮೋರ್ಚಾ ಕಾರ್ಯದರ್ಶಿಗಳಾದ ಖಂಡ್ರೆಶ್ವರ್,ಪ್ರಧಾನ ಕಾರ್ಯದರ್ಶಿಗಳಾದ ರಘು, ಪ್ರೌಢಶಾಲಾ
ಮುಖ್ಯ ಶಿಕ್ಷಕರಾದ ಶಿವಪ್ರಕಾಶ್, ಗ್ರಾಮದ ಮುಖಂಡರುಗಳಾದ ಧರಣೇಂದ್ರ, ಟಿಲ್ಲರ್ ರಾಜು, ಸಚಿನ್, ಸೇರಿದಂತೆ ಇತರರು ಹಾಜರಿದ್ದರು.
Tags
ಅರಕಲಗೂಡು