ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಸಾರಥ್ಯ; ರಾಜ್ಯಾಧ್ಯಕ್ಷರಾಗಿ ನೇಮಕ

ಚೆನ್ನೈ: ಕೆಲವು ತಿಂಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈಯವರನ್ನ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಡಾ. ಎಲ್​. ಮುರುಗನ್ ಅವರನ್ನ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಂಡ ಹಿನ್ನೆಲೆ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆ ಅಣ್ಣಾಮಲೈ ಅವರನ್ನ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಸೂಚಿಸಿದ್ದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಅಣ್ಣಾಮಲೈ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಇನ್ನೂ ಉಳಿಸಿಕೊಂಡಿದ್ದಾರೆ ಎಂಬುದಕ್ಕೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದೇ ಸಾಕ್ಷಿಯಾಗಿದೆ.

Post a Comment

Previous Post Next Post