ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸದ್ಯ ಜಾಮೀನಿನ ಮೇಲೆ ಹೊರ ಬಂದಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರು ನಟಿಯರು ಡ್ರಗ್ಸ್ ಸೇವನೆ ಮಾಡಿರೋ ಮಾಹಿತಿ ದೃಢವಾಗಿದೆ.
ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ತಲೆ ಕೂದಲನ್ನು 2020ರ ಅಕ್ಟೋಬರ್ನಲ್ಲಿ ಹೈದರಾಬಾದ್ನ FSLಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು ಸಿಸಿಬಿ ಪೊಲೀಸರ ಕೈಸೇರಿದೆ. ರಿಪೋರ್ಟ್ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದೆ.

ಅಷ್ಟೇ ಅಲ್ಲದೇ ಇಬ್ಬರೂ ನಟಿಯರು ಸೇರಿದಂತೆ ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು FSL ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಬರೋಬ್ಬರಿ 10 ತಿಂಗಳ ಬಳಿಕ ಎಫ್ಎಸ್ಎಲ್ ರಿಪೋರ್ಟ್ ಬಂದಿದ್ದು, ಸದ್ಯ ಜೈಲು ಸೇರಿ ಜಾಮೀನಿನ ನಟಿಮಣಿಯರಿಬ್ಬರು ಹೊರ ಬಂದಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಗೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದ್ದು ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಮೂಡಿಸಿದೆ