‘ವಿಶ್ವ ಸ್ತನ್ಯಪಾನ ಸಪ್ತಾಹ ‘ದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಶಾಂತಿಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 3.8.2021 ರಂದು ಹಮ್ಮಿಕೊಳ್ಳಲಾಗಿತ್ತು.
ನೆರೆದ ಗರ್ಭಿಣಿ ಹಾಗೂ ಹಾಲುಣಿಸುವ ತಾಯಂದಿರಿಗೆ ಎದೆಹಾಲಿನ ಮಹತ್ವದ ಬಗ್ಗೆ ,ಸರಿಯಾದ ರೀತಿಯಲ್ಲಿ ಹಾಲುಣಿಸುವ ಬಗ್ಗೆ, ಗರ್ಭಾವಸ್ಥೆಯಲ್ಲಿ ಸೇವಿಸುವ ಆಹಾರದ ಬಗ್ಗೆ ,ತಾಯಿಯ ಹಾಲಿಗೂ ,ಹಸುವಿನ ಹಾಲಿಗೂ, ಪೌಡರ್ ಹಾಲಿಗೂ ಇರುವ ವ್ಯತ್ಯಾಸದ ಬಗ್ಗೆ ,ಐಎಂಎಸ್ ಕಾಯ್ದೆ ಬಗ್ಗೆ ಸ್ತ್ರೀರೋಗ ತಜ್ಞರು ಗಳಾದ ಡಾ.ಭಾರತಿ ರಾಜಶೇಖರ್, ಹಾಸನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷರಾದ ಡಾ.ಸಾವಿತ್ರಿ ಹಾಗೂ ಕಾರ್ಯದರ್ಶಿಯಾದ ಡಾ. ಬಬಿತಾ ತಿಳುವಳಿಕೆ ನೀಡಿದರು.
ಹಾಲುಣಿಸುವಿಕೆಯ ಬಗ್ಗೆ ಮಾಹಿತಿ ಇರುವ ಕರಪತ್ರಗಳನ್ನು ಹಂಚಲಾಯಿತು.ಕಾರ್ಯಕ್ರಮವನ್ನು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ.ಕಿರಣ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಶಾಂತಿಗ್ರಾಮ ದ ಆಡಳಿತ ವೈದ್ಯಾಧಿಕಾರಿ ಡಾ.ಕಿರಣ್ ಕುಮಾರ್ ಹಾಗೂ ಹಿರಿಯ ವೈದ್ಯಾಧಿಕಾರಿ ಡಾ.ಪ್ರದೀಪ್ ಕುಮಾರ್ ಹಾಗು ಆಸ್ಪತ್ರೆ ಸಿಬ್ಬಂದಿವರ್ಗದವರು ಹಾಜರಿದ್ದರು. ಮೂವತ್ತಕ್ಕೂ ಹೆಚ್ಚು ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

