ಮೈಸೂರು : 75 ವರ್ಷದ ಜನ್ಮದಿನದಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದು, ಮುಂದಿನ ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷದ ಹಿಂದೆಯೇ ರಾಜಕೀಯ ನಿವೃತ್ತಿ ಘೋಷಣೆ ಮಾಡಬೇಕಿತ್ತು ಆದರೆ ರಾಜಕೀಯ ಸ್ಥಿತ್ಯಂತರಗಳಿಂದ ಅದು ಸಾಧ್ಯವಾಗಲಿಲ್ಲ ಈ ಹಿನ್ನಲೆ 75 ವರ್ಷದ ಜನ್ಮ ದಿನದಂದು ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ ಎಂದರು.
ಇದೇ ಸಮಯದಲ್ಲಿ ಅವರು ತಮ್ಮ ರಾಜಕೀಯ ಜೀವನ ಏಳು ಬೀಳುಗಳ ಬಗ್ಗೆ ಪುಸ್ತಕ ಬರೆದ ಪುಸ್ತಕ ಬಿಡುಗಡೆ ಮಾಡಿದರು, ನನಗೆ ರಾಜಕೀಯ ಜೀವನದ ಬಗ್ಗೆ ತೃಪ್ತಿ ಇದೆ ಎಂದ ಅವರು ಮುಂದೆ ಯಾವುದೇ ಕಾರಣಕ್ಕೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು
Tags
ಮೈಸೂರು