ಪೆಟ್ರೋಲ್ ಬೆಲೆಯಲ್ಲಿ ಶೇ. 60 ರಷ್ಟು ಭಾಗ ತೆರಿಗೆಯೇ ಆಗಿರುತ್ತದೆ ಎಂಬುದು ಗಮನಾರ್ಹ. ಕೇಂದ್ರ ಸರ್ಕಾರ ಪ್ರತೀ ಲೀಟರ್ ಪೆಟ್ರೋಲ್ಗೆ ವಿಧಿಸುವ ಅಬಕಾರಿ ಸುಂಕದ ಮೊತ್ತ 32.90 ರೂ ಇರುತ್ತದೆ.
ಬೆಂಗಳೂರು: ನಿರಂತರವಾಗಿ ಏರಿಕೆ ಕಾಣುತ್ತಾ ಬಂದಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ 19 ದಿನಗಳಿಂದ ತಟಸ್ಥವಾಗಿದೆ. ಜುಲೈ 18ರಿಂದ ಪೆಟ್ರೋಲ್ ಬೆಲೆ ಯಾವುದೇ ಏರಿಕೆ ಕಂಡಿಲ್ಲ. ಆದರೆ, ಮೇ 4ರಿಂದ ಇಲ್ಲಿಯವರೆಗೆ ಹಲವು ಬಾರಿ ಬೆಲೆ ಹೆಚ್ಚಳಗೊಂಡ ಪರಿಣಾಮ ಈ ಅವಧಿಯಲ್ಲಿ ಪೆಟ್ರೋಲ್ 11 ರೂ ದುಬಾರಿಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.25 ರೂ ದರ ಇದೆ. ಡೀಸೆಲ್ ಬೆಲೆ 95.26 ರೂ ನಲ್ಲೇ ಮುಂದುವರಿದಿದೆ. ಮಹಾನಗರಿಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಅತಿ ದುಬಾರಿ ಇದೆ. ಈ ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ 107.83 ಇದ್ದರೆ, ಡೀಸೆಲ್ ದರ 97.43 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.84 ರೂ ಇದೆ. ಇಲ್ಲಿ ಡೀಸೆಲ್ ಬೆಲೆ ಇನ್ನೂ 90 ರೂ ಗಡಿ ಮುಟ್ಟಿಲ್ಲ.
ಪೆಟ್ರೋಲ್ ಮತ್ತು ಡೀಸೆಲ್ ದರ ಈ ವರ್ಷ ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ಈ ವರ್ಷ ಬರೋಬ್ಬರಿ 63 ಬಾರಿ ಬೆಲೆ ಏರಿಕೆ ಕಂಡಿದೆ. ಇದು ಜನವರಿ 1ರಿಂದ ಜುಲೈ 9ರವರೆಗೆ ಸರ್ಕಾರವೇ ನೀಡಿರುವ ಲೆಕ್ಕ. ಈ ಬೆಲೆ ಏರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 3.34 ಲಕ್ಷ ಕೋಟಿ ರೂ ಆದಾಯ ಹರಿದುಬಂದಿದೆ. ಇನ್ನು, ಇದೇ ಅವಧಿಯಲ್ಲಿ ಡೀಸೆಲ್ ಬೆಲೆ 61 ಬಾರಿ ಹೆಚ್ಚಳಗೊಂಡಿದೆ. ಇನ್ನು, ಬೆಲೆ ಇಳಿಕೆ ವಿಷಯಕ್ಕೆ ಬಂದರೆ ಈ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಕಂಡಿದ್ದು ಕೇವಲ ನಾಲ್ಕು ಬಾರಿ ಮಾತ್ರ.
![]() |
Advertisement |
ದೇಶದ 20 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್ನಲ್ಲಿ ಪೆಟ್ರೋಲ್ ಬೆಲೆ 110 ರೂ ದಾಟಿದೆ. ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವುದು ರಾಜಸ್ಥಾನದ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ. ಇಲ್ಲಿ ಪೆಟ್ರೋಲ್ ಬೆಲೆ 113 ರೂ ದಾಟಿದೆ. ಈ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಕೂಡ ಕೆಲ ದಿನಗಳ ಹಿಂದೆಯೇ ಶತಕ ಬಾರಿಸಿದೆ. ಇಲ್ಲಿ ಡೀಸೆಲ್ ಬೆಲೆ ಲೀಟರ್ಗೆ 103.15 ರೂ ಇದೆ. ರಾಜಸ್ಥಾನ, ಒಡಿಶಾ ಮತ್ತು ಮಧ್ಯ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಶತಕ ದಾಟಿ ಮುಂದೆ ಹೋಗಿದೆ.
ವಿವಿಧೆಡೆ ಇರುವ ಇಂದಿನ (ಆಗಸ್ಟ್ 7) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:
ಬೆಂಗಳೂರು , ಪೆಟೋಲ್ : 105.25 ರೂ ಡೀಸೆಲ್ : 95 2.6 ದೆಹಲಿ : ಪೆಟ್ರೋಲ್ : 101.84 ರೂ ಡೀಸೆಲ್ : 8987 ರೂ ಮುಂಬೈ : ಪೆಟ್ರೋಲ್ : 107.83 ರೂ ಡೀಸೆಲ್ : 97 43 ರೂ ಚೆನ್ನೈ : ಪೆಟ್ರೋಲ್ : 102.40 ರೂ ಡೀಸೆಲ್ : 94 39 ರೂ ಕೋಲ್ಕತಾ : ಪೆಟ್ರೋಲ್ : 102.08 ಡೀಸೆಲ್ : 93.02 . ಹೈದರಾಬಾದ್ : ಪೆಟ್ರೋಲ್ : 103.83 ರೂ ಡೀಸೆಲ್ : 97 06 ರೂ ಬೋಪಾಲ್ ,ಪೆಟ್ರೋಲ್: 110.20 ರೂಡೀಸೆಲ್: 98.67 ರೂ