ಸಿಎಂ ದೆಹಲಿ ಭೇಟಿ ಹಿನ್ನಲೆ ಸಚಿವಾಂಕ್ಷಿಗಳಿಂದ ಲಾಭಿ

 

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿ ಭೇಟಿ ಹಿನ್ನೆಲೆ ಸಚಿವಾಕಾಂಕ್ಷಿಗಳ ಲಾಬಿಯೂ ಚುರುಕಾಗಿದೆ. ಬಾಕಿ ಉಳಿದಿರುವ 4 ಸ್ಥಾನಗಳಿಗೆ ಪೈಪೋಟಿ ತೀವ್ರಗೊಂಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಸಚಿವಾಕಾಂಕ್ಷಿಗಳು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಂಗಳವಾರ ರಾತ್ರಿ ಸಿಎಂ ಭೇಟಿ ಮಾಡಿದ ಪೂರ್ಣಿಮಾ ಶ್ರೀನಿವಾಸ್ ಈ ಕುರಿತು ಚರ್ಚೆ ನಡೆಸಿದ್ದಾರೆ. ಹೊಸ ಸಂಪುಟ ರಚನೆ ವೇಳೆ ಪೂರ್ಣಿಮಾರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಹೀಗಾಗಿ ಸಂಪುಟ ವಿಸ್ತರಣೆ ಸಂದರ್ಭ ತನ್ನನ್ನು ಪರಿಗಣಿಸುವಂತೆ ಪೂರ್ಣಿಮಾ ಸಿಎಂ ಬೊಮ್ಮಾಯಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ಸಿಎಂ ನಿವಾಸಕ್ಕೆ ಸಚಿವಾಕಾಂಕ್ಷಿಯಾಗಿರೋ ಆರ್. ಶಂಕರ್ ಕೂಡ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭ ಸಚಿವ ಸ್ಥಾನಕ್ಕೆ ಶಂಕರ್ ಬೇಡಿಕೆ ಇಟ್ಟಿದ್ದು. ತನ್ನನ್ನು ಸಂಪುಟ ವಿಸ್ತರಣೆ ಸಂದರ್ಭ ಪರಿಗಣಿಸುವಂತೆ ದೆಹಲಿ ನಾಯಕರ ಜತೆ ಚರ್ಚಿಸಲು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಷ್ಟೇ ಅಲ್ಲದೇ ಮತ್ತೊಬ್ಬ ಸಚಿವಾಕಾಂಕ್ಷಿ ಶಾಸಕ ರಾಜುಗೌಡ ಕೂಡಾ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಳಿದ ನಾಲ್ಕು ಸ್ಥಾನಗಳ ಭರ್ತಿ ವೇಳೆ ತಮ್ಮನ್ನು ಪರಿಗಣಿಸಲು ರಾಜುಗೌಡ ಮನವಿ ಮಾಡಿದ್ದಾರೆ. ಈ ಬಗ್ಗೆ ವರಿಷ್ಠರ ಜತೆ ಚರ್ಚಿಸಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ನಲ್ಲಿ‌ ಇರುವ ನಾಲ್ಕು ಸ್ಥಾನಗಳಿಗೆ ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಮಧ್ಯಾಹ್ಮ ದೆಹಲಿಗೆ ತೆರಳಲಿರುವ ಸಿಎಂ ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಿದೆ..

Post a Comment

Previous Post Next Post