ಮುಂದುವರಿದ ಹೆಸರು ಬದಲಿಸುವ ರಾಜಕಾರಣ – ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಗೆ ಮರುನಾಮಕರಣ

 ನವದೆಹಲಿ : ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಇದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.



ಈ ಬಗ್ಗೆ ಇಂದು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಿಸುವ ಬಗ್ಗೆ ಸಾಕಷ್ಟು ಮನವಿಗಳು ಬಂದಿದ್ದವು. ಬಹಳಷ್ಟು ಜನರು ಮೇಜರ್ ಧ್ಯಾನ್ ಚಂದ್ ಹೆಸರು ಸೂಚಿಸಿದ್ದರು. ಈ ಹಿನ್ನಲೆ ಇಂದು ಪ್ರಶಸ್ತಿ ಹೆಸರು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ

ಮೇಜರ್ ಧ್ಯಾನ್ ಚಂದ್ ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು, ಅವರು ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದರು. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನು ಇಡುವುದು ಸೂಕ್ತ. ಜೊತೆಗೆ ನಾನು ಜನರ ಭಾವನೆ ಗೌರವಿಸಿದ್ದೇನೆ ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ‌

ಪ್ರಧಾನಿ ನರೇಂದ್ರ ಮೋದಿ ನಿರ್ಧಾರದಿಂದ ಕಾಂಗ್ರೆಸ್ ಗೆ ಶಾಕ್ ಆಗಿದೆ. ರಾಜೀವ್ ಗಾಂಧಿ ಹೆಸರು ಪ್ರಶಸ್ತಿಯಿಂದ ತೆಗೆದುಹಾಕಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಯುಪಿಎ ಸರ್ಕಾರದಲ್ಲಿದ್ದ ಯೋಜನೆಗಳ ಹೆಸರು ಬದಲಿಸಿದ್ದ ಮೋದಿ ಸರ್ಕಾರ ಈಗ ಪ್ರಶಸ್ತಿಗಳ ಹೆಸರು ಬದಲಿಸಲು ಆರಂಭಿಸಿದೆ.

ಖೇಲ್ ರತ್ನ ಪ್ರಶಸ್ತಿಯನ್ನು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 1991-92ರಿಂದ ನೀಡುತ್ತಾ ಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ 25 ಲಕ್ಷ ನಗದು ಬಹುಮಾನದೊಂದಿಗೆ ಪದಕ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ.

Post a Comment

Previous Post Next Post