ರಾಜ್ಯದಲ್ಲಿ ಭಾನುವಾರ ಹೊರತುಪಡಿಸಿ ಉಳಿದ 6 ದಿನ ಕೊರೊನಾ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ (Corona Vaccine ) ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಕೊರೋನಾ ವಾರಿಯರ್ಸ್‌ಗಳು ಹಗಲಿರುಳು ಶ್ರಮಿಸುತ್ತಿದ್ದರು, ಜೊತೆಗೆ ಮಕ್ಕಳು ಹೊರತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನವನ್ನು ಆರೋಗ್ಯ ಇಲಾಖೆ ಮಾಡುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೆಲಸ ಮಾಡುತ್ತಿರುವ ಹಿನ್ನಲೆ ರಾಜ್ಯದಲ್ಲಿ ಆರೋಗ್ಯ ಸಿಬ್ಬಂದಿಗಳು ಅನಾರೋಗ್ಯಕ್ಕೆ ತುತ್ತಾಗಿ ಒತ್ತಡಕ್ಕೆ ಸಿಲುಕಿದ್ದರು. ಇದನ್ನು ಪರಿಗಣಿಸಿರೋ ಆರೋಗ್ಯ ‌ಇಲಾಖೆ ಭಾನುವಾರ ರಜೆ ನೀಡಲು ನಿರ್ಧರಿಸಿದೆ. ಹೀಗಾಗಿ ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.



ಭಾನುವಾರ ಹೊರತುಪಡಿಸಿ ಉಳಿದ 6 ದಿನ ಲಸಿಕೆ ನೀಡಲಾಗುತ್ತೆ. ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ ಎಂದು ಇಲಾಖೆ ತಿಳಿಸಿದೆ.



Post a Comment

Previous Post Next Post