ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಯನ್ನು ದೂರ : ಹುಲ್ಲಳ್ಳಿ ಸುರೇಶ್

ಜಾವಗಲ್: ‘ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಯನ್ನು ದೂರ ಮಾಡಬಹುದಾಗಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್ ತಿಳಿಸಿದರು.
   ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು ಈ ಭಾಗದಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದು. ಜನರು ಕುಡಿಯುವ ನೀರನ್ನು ಶುದ್ಧೀಕರಿಸಿ ಕುಡಿಯಬೇಕು ಎಂದರು. 
   ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿರ್ದೇಶಕ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗಶ್ರೀ, ದೊರೆಸ್ವಾಮಿ, ಅರುಣ್, ಬಿಜೆಪಿ ಹೋಬಳಿ ಅಧ್ಯಕ್ಷ ಮಸಾಲೆ ರಮೇಶ್, ಉಪಪ್ರಾಂಶುಪಾಲ ಯೋಗೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಪುಟ್ಟೇಗೌಡ, ಸಹಶಿಕ್ಷಕರಾದ ಶಿವಲಿಂಗಮೂರ್ತಿ, ಲೋಹಿತ್, ಸೌಮ್ಯ, ವಿದ್ಯಾ, ಮಂಜುಳಾ, ಆರ್.ಎಸ್.ಎಸ್.ಮುಖಂಡ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಸಿದ್ದಪ್ಪ ಶೆಟ್ಟಿ, ಜೆ.ಎಸ್.ಚೇತನ್, ಮಧುಸೂದನ್, ಮತ್ತಿತರರು ಇದ್ದರು

Post a Comment

Previous Post Next Post