ನ್ಯಾಯಮೂರ್ತಿಗಳಿಗೆ_ಪ್ರಮಾಣವಚನ_ಬೋದನ



ಬೆಂಗಳೂರು :  ಉಚ್ಛನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣವರ್, ಶ್ರೀಮತಿ ಮಕ್ಕಿಮನೆ ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವಕುಮಾರ್, ಪದ್ಮರಾಜ್ ನೇಮಚಂದ್ರ ದೇಸಾಯಿ, ಪಂಜಿಗಡ್ಡೆ ಕೃಷ್ಣ ಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಅವರು ಕರ್ನಾಟಕ ಉಚ್ಛನ್ಯಾಯಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾಗಿ ಇಂದು ದಿನಾಂಕ: 25-09-2021ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.  

ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹಾಗೂ ಕರ್ನಾಟಕ ಉಚ್ಚನ್ಯಾಯಾಲಯದ ಗೌರವಾನ್ವಿತ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು.

Post a Comment

Previous Post Next Post