ಬೇಲೂರು: ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗುವಂತಾಬೇಕೆಂದು ಶಿಶು ಅಭಿವೃದ್ಧಿ ಸೇವಾ ಯೋಜನಾಧಿಕಾರಿ ಶಿವಪ್ರಕಾಶ್ ಹೇಳಿದರು.
ಪಟ್ಟಣದ ಬಿಆರ್‌ಸಿ ಕೇಂದ್ರದ ಆವರಣದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಪೌಷ್ಠಿಕತೆ ಮತ್ತು ಕಡಿಮೆ ತೂಕವಿರುವ ಮಕ್ಕಳ ಆರೋಗ್ಯ ಕಾಪಾಡುವುದೆ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬೇಲೂರು ತಾಲೂಕಿನಲ್ಲಿ ೩೨೬ ಮಕ್ಕಳಲ್ಲಿ ಅಪೌಷ್ಠಿಕತೆ ಕಾಡುತ್ತಿದೆ. ಈ ಮಕ್ಕಳಿಗೆ ಸರಿಯಾಗಿ ಪೌಷ್ಠಿಕ ಆಹಾರಗಳು ದೊರಕಿ ಆರೋಗ್ಯವಂತರನ್ನಾಗಿ ಮಾಡುವುದಕ್ಕೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಗರ್ಭಿಣಿಯರು, ಭಾಣಂತಿಯರು, ಕಿಶೋರಿಯರಿಗೆ ಸೌಲಭ್ಯಗಳನ್ನು ತಲುಪಿಸಬೇಕಿದೆ.
ಅಂಗನವಾಡಿ ಸಿಬ್ಬಂದಿ ಎಚ್ಚರಿಕೆಯಿಂದ ಕೆಲಸ ಮಾಡುವುದರೊಂದಿಗೆ ನೈರ್ಮಲ್ಯ ಕಾಪಾಡಲು ಮುಂದಾಗಬೇಕು. ಬಲಿಷ್ಠರು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ. ಆದರೆ ದುರ್ಬಲರಿಗೆ ಪಡೆಯಲು ಸಾಧ್ಯವಾಗುವುದಿಲ್ಲ. ಇಂತಹವರನ್ನು ಗುರುತಿಸಿ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕಿದೆ. ಪೋಷಣ ಮಾಸಾಚರಣೆ ಅಭಿಯಾನ ಹಾಗೂ ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಕೋವಿಡ್ ಸಂಬAಧಿತ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಾಲೂಕು ಆಡಳಿತಕ್ಕೆ ಸಹಕಾರ ನೀಡಬೇಕು ಎಂದರು.
ಸಿಆರ್‌ಪಿ ಜಯಣ್ಣ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರ ಪಾತ್ರ ಮಹತ್ತರದ್ದಾಗಿದೆ. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದಲ್ಲದೆ, ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು. ಬಿಆರ್‌ಸಿ ಮೋಹನ್‌ರಾಜ್, ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕಿ ಪೂರ್ಣಿಮಾ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿಯರಾದ ಶೈಲಜ, ಭಾಗ್ಯಮ್ಮ, ರತ್ನ, ಪಲ್ಲವಿ, ಕುಮಾರಿ, ಪ್ರಮೀಳಾ, ಶ್ರೀದೇವಿ, ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ಮುಖ್ಯ ಶಿಕ್ಷಿ ಶಕುಂತಲಾ, ಶಿಕ್ಷಕಿಯರಾದ ಶೋಭಾ, ಪ್ರತಿಮಾ, ಶಕುಂತಲಾ ಸೇರಿದಂತೆ ಇತರರಿದ್ದರು