ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಜಿಲ್ಲಾಧಿಕಾರಿ ಆರ್. ಗಿರೀಶ್

ಹಾಸನ ಸೆ ೦೫ (ಹಾಸನ ಸೀಮೆ):-  ಸಮಾಜದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರವೂ ಅತೀ ಮುಖ್ಯ  ಹಾಗಾಗಿ ಅವರಿಗೆ ಉತ್ತಮ ಮಾರ್ಗದರ್ಶನ ನೀಡಿ  ಭವಿಷ್ಯವನ್ನು ರೂಪಿಸುವಲ್ಲಿ  ಶಿಕ್ಷಕರ ಜವಾಬ್ದಾರಿ ಬಹು ಮುಖ್ಯವಾದುದು  ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಸ್.ಆರ್.ಎಸ್. ಪ್ರಜ್ಞಾ ಶಾಲೆಯಲ್ಲಿಂದು ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಕೃಷ್ಣನ್  ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ಶ್ರೇಷ್ಠ ಶಿಕ್ಷಣ ತಜ್ಞರು, ಆಧ್ಯಾತ್ಮಿಕ ಚಿಂತಕರು, ತತ್ವಜ್ಞಾನಿಗಳು ಹಾಗೂ ಉತ್ತಮ ಆಡಳಿತಗಾರ ರಾಗಿದ್ಧ ಡಾ. ಸರ್ವಪಲ್ಲಿ ರಾಧ ಕೃಷ್ಣನ್ ಅವರು ಭಾರತದ ಎರಡನೆ  ರಾಷ್ಟçಪತಿಯಾಗಿ ಸೇವೆ ಸಲ್ಲಿಸಿದ ನಂತರ ಪ್ರಾಧ್ಯಾಪಕರಾಗಿ ಮುಂದುವರೆ ಯುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಿದ  ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು  ಹೇಳಿದರು.

ಬಲಿಷ್ಠ ಭಾರತ ನಿರ್ಮಾಣ  ಮಾಡುವಲ್ಲಿ ಶಿಕ್ಷಣದ ಪಾತ್ರ ಅಪಾರ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ, ವಿದ್ಯೆ ಬುದ್ದಿ,ವಿನಯ, ಸಂಸ್ಕೃತಿಯನ್ನು ಕಲಿಸುವುದರ  ಮುಖಾಂತರ  ತಮ್ಮಲ್ಲಿರುವ ಜ್ಞಾನವನ್ನು ಧಾರೆ ಎರೆದು ಉತ್ತಮ ಜೀವನವನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಗಾಢವಾದ ಪ್ರಭಾವ ಬೀರುವುದರಿಂದ ಮಕ್ಕಳಿಗೆ  ಶಿಕ್ಷಣದ ಜೊತೆಗೆ ದೇಶಾಭಿಮಾನ, ನೈತಿಕ ಮೌಲ್ಯಗಳನ್ನು ಕಲಿಸಬೇಕು  ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ -೧೯ ಸಮಸ್ಯೆಯ ನಡುವೆಯೂ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ವಿಶೇಷ ಕಾಳಜಿವಹಿಸಿ ಪೂರ್ಣ ತರಬೇತಿ ನೀಡುವ  ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಟ್ಟ  ಎಲ್ಲಾ ಶಿಕ್ಷಕರನ್ನು ಅವರು ಅಭಿನಂದಿಸಿದರು.



ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ, ಜ್ಞಾನ, ಉತ್ತಮ ಮಾರ್ಗದಶನ  ನೀಡಿ  ಸಮಾಜಮುಖಿಯಾಗಿ  ಯೋಚನೆ ಮಾಡುವಂತಹ ಗುಣಗಳನ್ನು  ಹೇಳಿಕೊಡುವ ಮೂಲಕ  ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವವರೇ ನಿಜವಾದ ಶಿಕ್ಷಕರು ಎಂದರು.

ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ಭಾರತದ ದ್ವಿತೀಯ  ರಾಷ್ಟçಪತಿಯಾಗಿ ಸೇವೆ ಸಲ್ಲಿಸಿರುವುದರ ಜೊತೆಗೆ  ಪ್ರಾಧ್ಯಾಪಕರಾಗಿ  ಕಾರ್ಯ ನಿರ್ವಹಿಸಿ ಶಿಕ್ಷಕರ ಗೌರವ ಮತ್ತು ಅವರ ಸ್ಥಾನವನ್ನು  ದೇಶದ ನಾಗರೀಕರಿಗೆ ತಿಳಿಸುವಂತಹ ಕೆಲಸವನ್ನು ಮಾಡಿ ಎಲ್ಲಾ ಶಿಕ್ಷಕರಿಗೂ  ಮಾದರಿಯಾಗಿದ್ದಾರೆ ಎಂದು ಅವರು ಹೇಳಿದರು.

ಇದೇ ವೇಳೆ ೨೦೨೧-೨೨ ನೇ ಸಾಲಿನಲ್ಲಿ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಪ್ರಶಸ್ತಿ ಸ್ಮರಣಿಕೆ ಮತ್ತು ಪುಸ್ತಕ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹಾಸನ  ನಗರಸಭೆ ಅಧ್ಯಕ್ಷರಾದ ಆರ್. ಮೋಹನ್,  ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶರಾದ ಕೆ.ಎಸ್. ಪ್ರಕಾಶ್, ಡಯಟ್ ಪ್ರಾಂಶುಪಾಲರಾದ ಪುಟ್ಟರಾಜು, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಈ. ಕೃಷ್ಣೇಗೌಡ,   ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎನ್ ಬಲರಾಮ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post