ಬೇಲೂರು:ರಸ್ತೆಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು, ವಸತಿ ನಿಲಯಗಳಲ್ಲಿನ ಅಸರ್ಮಪಕ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿ ಅಖಿಲ ವಿದ್ಯಾರ್ಥಿ ಪರಿಷತ್ತು ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
![]() |
ಬೇಲೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು |
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ನಂತರ ಮಾತನಾಡಿದ ಎಬಿವಿಪಿ ತಾಲೂಕು ಸಂಚಾಲಕ ಗಿರೀಶ್ ಕೋವೀಡ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಸರ್ಕಾರ ಸ್ಥಗಿತಗೊಳಿಸಿತ್ತು.
ಕೊರೊನಾ ವೈರಸ್ ಇಳಿಮುಖವಾದ ಬಳಿಕ ಸರ್ಕಾರ, ಶಾಲಾ-ಕಾಲೇಜು ಆರಂಭಕ್ಕೆ ಹಸಿರು ನಿಶಾನೆ ತೋರಿದೆ.
ಆದರೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಬಸ್ ಸೌಲಭ್ಯ ಕಲ್ಪಿಸಿಲ್ಲ. ಹಾಗೂ ವಸತಿ ಶಾಲೆಗಳಲ್ಲಿನ ಅಸಮರ್ಪಕತೆಯಿಂದ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣವೆ ಸಂಬಂಧ ಪಟ್ಟವರು ಸಮಸ್ಯೆ ಬಗೆಹರಿಸಬೇಕಿದೆ. ಇಲ್ಲವಾದರೆ ಹೋರಾಟ ಅನಿವಾರ್ಯವೆಂದು ಎಚ್ಚರಿಸಿದರು.
ವಿದ್ಯಾರ್ಥಿನಿ ಮೋನಿಕಾ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲಾ ರೀತಿಯ ಮಾರ್ಗ ಸೂಚನೆ ಹಾಗೂ ಮುಂಜಾಗ್ರತಾ ಕ್ರಮಗಳೊಂದಿಗೆ ಪುನಃ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾದರೂ ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸದ ಕಾರಣ ಶಾಲಾ ಕಾಲೇಜಿಗೆ ಬರಲು ತೊಂದರೆ ಆಗುತ್ತಿದೆ. ಹಾಸ್ಟೆಲ್‌ಗಳ ತೆರೆಯದೆ ಬಡಮಕ್ಕಳು ಅವರ ಕುಟುಂಬ ನೋವು ಅನುಭವಿಸುತ್ತಿದೆ. ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತ ಇಲಾಖೆ ವ್ಯಾಪ್ತಿಯ ಬರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡದೆ ಸರ್ಕಾರ ಮಲತಾಯಿ ದೋರಣೆ ಮಾಡುತ್ತಿದೆ. ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು, ಬಸ್ ವ್ಯವಸ್ಥೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನಗರ ಕಾರ್ಯದರ್ಶಿ ವರುಣ್, ಪ್ರಿಯಾಂಕ, ದರ್ಶನ್, ಶಮಂತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.