ಅಕ್ಟೋಬರ್ 30 ರಂದು ಹಾಸನದಲ್ಲಿ ಮಿನಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ದ ವತಿಯಿಂದ ಅಕ್ಟೋಬರ್ 30ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರಕಾರಿ ಐ.ಟಿ.ಐ ಕಾಲೇಜು ಆವರಣದಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಹಾಸನ ಮೈಸೂರು ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಸ್.ಎಸ್.ಎಲ್.ಸಿ/ಪಿಯುಸಿ ಯಾವುದೇ ಪದವಿ/ಡಿಪ್ಲೋಮೋ/ಐಟಿಐನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಬಯೋಡೇಟಾ ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈ ಮೂಲಕ ತಿಳಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08172-296374ಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ತಿಳಿಸಲಾಗಿದೆ.

Post a Comment

Previous Post Next Post