ನಟ ಪುನೀತ್ ಆರೋಗ್ಯ ಸ್ಥಿತಿ ಗಂಭೀರ

ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್​ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ ಎನ್ನಲಾಗುತ್ತಿದೆ. 
ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

Post a Comment

Previous Post Next Post