ಹಾಸನ: ಹೇಮಾವತಿ, ಯಗಚಿ, ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಅಕ್ರಮ ಭೂ ಮಂಜೂರು ಆಗಿರುವ ಕುರಿತು ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಪದ ನಿಮಿತ್ತ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ತನಿಖಾಧಿಕಾರಿ ಮೊಹಮ್ಮದ್ ಮೊಹಿಸೀನ್ ಜಿಲ್ಲಾಧಿಕಾರಿ ಕಚೇರಿ ಭೇಟಿ ನೀಡಿ ಅಧಿಕಾ
ರಿಗಳೊಂದಿಗೆ ಸಭೆ ನಡೆಸಿ ಪರಿಶೀಲನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್, ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಿವ ಕುಮಾರ್, ಬೆಂಗಳೂರಿನ ಅಪರ ಪ್ರಾದೇಶಿಕ ಆಯುಕ್ತರಾದ ಇಲ್ಲಾವುದ್ದಿನ್.ಜೆ, ಮೈಸೂರು ಅಪರ ಪ್ರಾದೇಶಿಕ ಆಯುಕ್ತರಾದ ರೂಪಶ್ರೀ, ಜಿಲ್ಲಾಧಿಕಾರಿ ಆರ್. ಗಿರೀಶ್, ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ರೂಪ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ, ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್, ಹೇಮಾವತಿ ಜಲಾಶಯ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಹಾಗೂ ಮತ್ತಿತರರು ಹಾಜರಿದ್ದರು.
Tags
ಹಾಸನ