ಹೆಚ್.ಡಿ.ರೇವಣ್ಣನವರ ಅಧ್ಯಕ್ಷತೆಯಲ್ಲಿ ಹೊಳೆನರಸೀಪುರದ ಪ್ರಗತಿ ಪರಿಶೀಲನಾ ಸಭೆ

ಹೊಳೆನರಸೀಪುರ: ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿಂದು ಶಾಸಕ ಹೆಚ್.ಡಿ.ರೇವಣ್ಣನವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕು ಕೆ.ಡಿ.ಪಿ ಸದಸ್ಯರು ಭಾಗವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಕೃಷಿ, ನೀರಾವರಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಶಿಕ್ಷಣ ಇಲಾಖೆ, ಮೀನುಗಾರಿಕೆ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ಸರ್ಕಾರದ ಯೋಜನೆಗಳನ್ನು ಮತ್ತು ಸೌಲಭ್ಯಗಳನ್ನು ಸೂಕ್ತವಾದ ಫಲಾನುಭವಿಗಳಿಗೆ ತಲುಪಿಸಲು ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.


Post a Comment

Previous Post Next Post