ಬೇಲೂರು : ಭಾರತದ ೭೫ ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ದೇಶ ವಾಸಿಗಳಿಗೆ ರಾಷ್ಟ್ರೀಯತೆ ಜಾಗೃತಿ ಅಭಿಯಾನ ಮತ್ತು ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಇಲ್ಲಿ ಯಶಸ್ವಿಯಾಯಿತು.
ಬೇಲೂರಿನಲ್ಲಿ ಕಾನೂನು ಉಚಿತ ನೆರವು ಅರಿವು ಕಾರ್ಯಕ್ರಮ ಅಭಿಯಾನದ ಅಂತ್ಯದಲ್ಲಿ ಮೆರವಣಿಗೆ ಮೂಲಕ ಜಾಗೃತಿ ಮೂಡಿಸಲಾಯಿತು |
ಈ ಸಂದರ್ಭ ಅಭಿಯಾನದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಇಲ್ಲಿನ ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವೀರಭದ್ರಯ್ಯ, ವಿವಿಧ ಇಲಾಖೆಯ ಸಹಯೋಗದಲ್ಲಿ ನಡೆದ ಜಾಗೃತಿ ಅಭಿಯಾನ ಯಶಸ್ವಿಯಾಗಿದೆ. ಸುಮಾರು ೩೧೦ ಅಂಗನವಾಡಿ ಕೇಂದ್ರಗಳು ಹಾಗೂ ೧೫೫ ಗ್ರಾಮ ಪಂಚಾಯತಿ ಸೇರಿದಂತೆ ವಿವಿಧ ಇಲಾಖೆಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಬಹುತೇಕ ಕಡೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಾಗಿ ಕುಂದುಕೊರತೆಗಳನ್ನು ಹೇಳಿದ್ದಾರೆ. ವಿಶೇಷವಾಗಿ ಸರ್ಕಾರದ ಸವಲತ್ತುಗಳನ್ನು ಅರ್ಹರಿಗೆ ನೀಡುತ್ತಿಲ್ಲ ಎಂಬ ಬಗ್ಗೆ ವ್ಯಾಪಕವಾಗಿ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ತ್ವರಿತ ಕೆಲಸಗಳನ್ನು ನಿರ್ವಹಿಸುವ ಬಗ್ಗೆ ಗಮನ ನೀಡಬೇಕೆಂದು ಸಲಹೆ ನೀಡಿದರು.
Advertisement |
Advertisement |
ಅಭಿಯಾನದ ಮೆರವಣಿಗೆಯನ್ನು ಚನ್ನಕೇಶವಸ್ವಾಮಿ ದೇಗುಲದ ಮುಂಭಾಗದಿoದ ಬಸವೇಶ್ವರ ವೃತ್ತದ ತನಕ ನಡೆಸಲಾಯಿತು. ವೃತ್ತ ನಿರೀಕ್ಷಕ ಶ್ರೀಕಾಂತ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಕ್ಷೇತ್ರ ಸಮನ್ವಯ ಸಂಪನ್ಮೂಲ ಅಧಿಕಾರಿ ಮೋಹನ್‌ರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್‌ಕುಮಾರ್, ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು ಇದ್ದರು.