ಬೇಲೂರು: ಹೃದಯಾಘಾತದಿಂದ ಮೃತಪಟ್ಟ ಪುನೀತ್ ರಾಜ್ಕುಮಾರ್ ಅಭಿಮಾನಿಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಬೇಲೂರು ಪಟ್ಟಣದ ಹೆಚ್.ಟಿ.ರವಿ ಬೆಂಗಳೂರಿಗೆ ತೆರಳಿ ಪುನೀತ್ ಪಾರ್ಥಿವ ಶರೀರದ ದರ್ಶನ ಪಡೆದು ಬಂದಿದ್ದರು. ಕೆಲ ದಿನಗಳ ಬಳಿಕ ರವಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಹಾಸನದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ.
ಸಾವಿಗೂ ಮುನ್ನ ತಮ್ಮ ಕಣ್ಣುಗಳನ್ನು ದಾನ ಮಾಡಿ ಎಂದು ರವಿ ತಮ್ಮ ಕುಟುಂಬಸ್ಥರಿಗೆ ಮನವಿ ಮಾಡಿಕೊಂಡಿದ್ದಾರೆ. ರವಿ ಕೊನೆ ಆಸೆಯಂತೆ ಕುಟುಂಬಸ್ಥರು ಎರಡು ಕಣ್ಣುಗಳನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾನ ಮಾಡಿದ್ದಾರೆ.