ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ನಮ್ಮನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ ಅವರು ನಿಧನರಾದರು...' ಎಂದು ಭಾರತೀಯ ವಾಯು ಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.


ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ವರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು.


ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.


ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

Post a Comment

Previous Post Next Post