ರಾಷ್ಟ್ರಕವಿ ಕುವೆಂಪು ಅವರ ಸೊಸೆ ಇನ್ನಿಲ್ಲ..

 ಸಾಹಿತಿ ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 84 ವರ್ಷದ ಅವರಿಗೆ ಇಂದು ಮುಂಜಾನೆ ಹೃದಯಾಘಾತ ಆಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.



ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

ರಾಜೇಶ್ವರಿ ತೇಜಸ್ವಿ ಅವರುನನ್ನ ತೇಜಸ್ವಿಮತ್ತುನಮ್ಮ ಮನೆಗೂ ಬಂದರು ಗಾಂಧೀಜಿಪುಸ್ತಕಗಳನ್ನು ಬರೆದಿದ್ದಾರೆ.

ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ವರೆಗೆ ಅಂತಿಮ ದರ್ಶನ ಇರಲಿದೆ‌. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

 


Post a Comment

Previous Post Next Post