ಚನ್ನರಾಯಪಟ್ಟಣ ತಾಲೂಕು ವ್ಯಾಪ್ತಿಯ ಏತ ನೀರಾವರಿ ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಹಣ ಶೀಘ್ರದಲ್ಲೇ ಬಿಡುಗಡೆ

ಬೆಳಗಾವಿ : ಏತ ನೀರಾವರಿ ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಏತ ನೀರಾವರಿ ಯೋಜನೆಯ ಭೂಸ್ವಾಧಿನ ಪ್ರಕ್ರಿಯೆ ಸಂಬಂಧ ಹಣ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.


    ಪರಿಷತ್ತಿನಲ್ಲಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್. ಅಶೋಕ್ , ಜಮೀನು ಕಳೆದುಕೊಂಡವರು ಯಾರೂ ಸೂಕ್ತ ರೀತಿಯಲ್ಲಿ ದಾಖಲೆ ಸಲ್ಲಿಕೆ ಮಾಡುತ್ತಾರೋ, ಅವರಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
    ಹಾಸನ ಜಿಲ್ಲಾಯ ಚನ್ನರಾಯಪಟ್ಟಣ ತಾಲೂಕು ವ್ಯಾಪ್ತಿಯ ಕೆರೆ ತುಂಬಿಸುವ ಏತ ನೀರಾವರಿ ಯೋಜನೆಗಳಿಗಾಗಿ ಇದುವರೆಗೆ 23 ಗ್ರಾಮಗಳಲ್ಲಿ127 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ. ಭೂ ಮಾಲೀಕರಿಗೆ ಪರಿಹಾರ ನೀಡುವ ಸಂಬಂಧ ಅಗತ್ಯ ದಾಖಲೆಗಳನ್ನು ಹಾಜರುಪಡಿಸದೇ ಇರುವುದರಿಂದ ಭೂಮಾಲೀಕರಿಗೆ ಪರಿಹಾರ ಪಾವತಿಸಲು ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.
    ಭೂಮಾಲೀಕರಿಗೆ ಜಮೀನಿನ ಪರಿಹಾರ ಪಾವತಿಸಲು ಆಗುತ್ತಿರುವ ವಿಳಂಬವನ್ನು ನಿವಾರಿಸಲು ಯೋಜನೆಯನ್ನು ರೂಪಿಸಲು ಭೂಸ್ವಾಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಶೀಘ್ರದಲ್ಲೇ ಭೂ ಮಾಲೀಕರಿಗೆ ಪರಿಹಾರ ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Post a Comment

Previous Post Next Post